Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಆರ್. ಡೆಂಟಲ್ ಕಾಲೇಜು ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬೆಳಗಿನಜಾವ ಸುಮಾರು 2 ಗಂಟೆಗೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಮೈಸೂರು ಕಡೆಯಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಬರುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಮತ್ತು ಗೌರಿಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಇಬ್ಬರೂ ವಿದ್ಯಾರ್ಥಿಗಳು ರಸ್ತೆಗೆ ಅಪ್ಪಳಿಸಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button