Kannada NewsKarnataka News

*ಮತ್ತೊಂದು ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ; ಇನ್ನೋರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಬೈಕ್ ಹಾಗೂ ಬೊಲೆರೊ ವಾಹನದ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ತುಮಕೂರಿನ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ಈ ಅಪಘಾತ ಸಂಭವಿಸಿದೆ. 16 ವರ್ಷದ ಈಶ್ವರ್ ಹಾಗೂ 17 ವರ್ಷದ ಯಶ್ವಂತ್ ಮೃತ ವಿದ್ಯಾರ್ಥಿಗಳು. ಗಾಯಾಳು ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ನಿಮಾನ್ಸ್ ಗೆ ಶಿಫ್ಟ್ ಮಾಡಲಾಗಿದೆ.

ಮೂವರು ವಿದ್ಯಾರ್ಥಿಗಳು ಆಂಧ್ರಪ್ರದೇಶದ ರೊದ್ದಂ ಮಂಡಲದ ಚಿನ್ನಿಕೊಡಿಪಲ್ಲಿ ಗ್ರಾಮದವರು. ಪಾವಗಡದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button