
ಪ್ರಗತಿವಾಹಿನಿ ಸುದ್ದಿ; ಯಲ್ಲಾಪುರ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ಇನೋವಾ ಕಾರಿಗೆ ಬೈಕ್ ಟಚ್ ಆಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದಲ್ಲಿ ನಿಂತಿದ್ದ ಇನ್ನೊಂದು ಇನೋವಾಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ನಲ್ಲಿ ರಾಜು ಹಾಗೂ ದರ್ಶನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಮೀರ್ ಎಂಬಾತ ಗಾಯಗೊಂಡಿದ್ದಾರೆ.
ಒಂದೇ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಮೃತರು ಹಾಗೂ ಗಾಯಾಳುಗಳು ಯಲ್ಲಾಪುರದವರಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ