LatestUncategorized

*ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಗದಗ: ಎರಡು ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ.

ಶಿವಪ್ಪ ನಾಯ್ಕ್ (50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾನಿ (33) ಹಾಗೂ ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್ (31) ಮೃತರು.

Home add -Advt

ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

https://pragati.taskdun.com/rssofficecm-basavaraj-bommaivisit/

Related Articles

Back to top button