ಪ್ರಗತಿವಾಹಿನಿ ಸುದ್ದಿ; ರಾಮನಗರ: ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸಾಬರಪಾಳ್ಯದಲ್ಲಿ ನಡೆದಿದೆ.
ಕಲ್ಯಾ ಗ್ರಾಮದ ನಿವಾಸಿ ಯೋಗೇಶ್ (47) ಹಾಗೂ ಮಗಳು ಹರ್ಷಿತಾ (14) ಮೃತ ದುರ್ದೈವಿಗಳು. ಮಗಳನ್ನು ಬೈಕ್ ನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ಭೀಕರತೆಗೆ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ