
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.




