Kannada NewsKarnataka NewsLatest
*ಭೀಕರ ಅಪಘಾತ; DYSP ಪುತ್ರ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿವೈ ಎಸ್ ಪಿಯೋರ್ವರ ಪುತ್ರ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.
ಧೀರಜ್ (21) ಮೃತ ಯುವಕ. ಕೆಜಿಎಫ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ. ಲಾರಿಗೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ.
ಮೃತ ಯುವಕ ಚಿತ್ರದುರ್ಗ ಡಿವೈ ಎಸ್ ಪಿ ಅನಿಲ್ ಕುಮಾರ್ ಅವರ ಮಗ ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಂಗಾರ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.




