Kannada NewsLatestNational

*ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮೇಲೆಯೇ ಪ್ರೇಮಿಗಳ ರೋಮ್ಯಾನ್ಸ್….*

ಪ್ರಗತಿವಾಹಿನಿ ಸುದ್ದಿ; ಲಖನೌ: ಚಲಿಸುತ್ತಿದ್ದ ಬೈಕ್ ನಲ್ಲಿಯೇ ರೋಮ್ಯಾನ್ಸ್ ಮಾಡುತ್ತಿದ್ದ ಜೋಡಿಗೆ ಪೊಲೀಸರು ದಂಡ ವಿಧಿಸಿರುವ ಘಟನೆ ನಡೆದಿದೆ.

ಯುವಕ ಬೈಕ್ ಓಡಿಸುತ್ತಿದ್ದರೆ ಆತನ ಪ್ರೇಯಸಿ ಆತನ ಎದುರು ಟ್ಯಾಂಕ್ ಮೇಲೆ ಕುಳಿತು ಬಿಗಿದಪ್ಪಿ ಹೋಗುತ್ತಿದ್ದ ಜೋಡಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Home add -Advt

ಹಾಡ ಹಗಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ನಲ್ಲಿ ರೊಮ್ಯಾನ್ಸ್ ಮಾಡುತ್ತಾ ಚಲಿಸುತ್ತಿದ್ದ ಜೋಡಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಟ್ರ್ಯಾಫಿಕ್ ಪೊಲೀಸರು, ಮೋಟರ್ ವೆಹಿಕಲ್ ಆಕ್ಟ್ ಪ್ರಕಾರ ಯುವಕನಿಗೆ 8 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಈ ಘಟನೆ ನಡೆದಿದ್ದು, ಯುವ ಜೋಡಿಯ ಹುಚ್ಚಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದು, ಯುವಕನಿಗೆ ದಂಡ ವಿಧಿಸಿದ್ದಾರೆ. ಅಲ್ಲದೇ ಕಾನುನು ಕ್ರಮ ಕೈಗೊಳ್ಳುವುದಾಗಿ ಹಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

Related Articles

Back to top button