Kannada NewsKarnataka NewsLatestUncategorized

*ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ; ಮೂವರು ಮಕ್ಕಳು ಗಂಭೀರ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಭೀಕರ ರಸ್ತೆ ಅಪಘಾತದಲ್ಲಿ ದಂಪೈ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಹಾಗೂ ಸ್ಕೂಟಿಗೆ ಟೆಂಪೋ ಡಿಕ್ಕಿ ಹೊಡೆದಿದ್ದು ಪತಿ-ಪತ್ನಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳು ಗಾಯಗೊಂಡಿದ್ದಾರೆ.

ಕೋಲಾರದ ಚಿಂತಾಮಣಿ ತಾಲೂಕಿನಲ್ಲಿ ಈ ದುರಂತ ಸಂಭವಿಸಿದೆ. ಶ್ರೀರಾಮ್ (40) ಹಾಗೂ ಶ್ಯಾಮಲಾ (35) ಮೃತ ದಂಪತಿ. ಘಟನೆಯಲ್ಲಿ ಮೂವರು ಮಕ್ಕಳು ಗಾಯಗೊಂಡಿದ್ದು, ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದೆ. ಗಾಯಾಳು ಮಕ್ಕಳನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಓರ್ವ ಮಗು ಹಾಗೂ ಶ್ಯಾಮಲಾ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಪತಿ ಶ್ರೀರಾಮ್ ಹಾಗೂ ಇನ್ನಿಬ್ಬರು ಮಕ್ಕಳು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟೊಮೆಟೋ ತುಂಬಿದ್ದ ಟೆಂಪೋ ಬೈಕ್ ಹಾಗೂ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕೆಳಗೆ ಬಿದ್ದ ಶ್ರೀರಾಮ್ ಮೇಲೆಯೇ ಟೆಂಪೊ ಹರಿದು ಹೋಗಿದೆ.

ಬೈಕ್ ಹಾಗೂ ಸ್ಕೂಟಿಗೆ ಡಿಕ್ಕಿ ಹೊಡೆದ ಟೆಂಪೊ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿದ್ದು, ಪರಿಣಾಮ ಟೆಂಪೊಗೆ ಬೆಂಕಿ ಹೊತ್ತಿ ಉರಿದಿದೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Related Articles

Back to top button