Latest

*ಭೀಕರ ಅಪಘಾತ; ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿಪ್ಪರ್ ಲಾರಿ ಬೈಕ್ ಗೆ ಗುದ್ದಿದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವರು ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘತನೆ ಬೆಂಗಳೂರಿನ ನೈಸ್ ರಸ್ತೆ ಬಳಿ ನಡೆದಿದೆ.

ಸರಿತಾ (21) ಮೃತ ವಿದ್ಯಾರ್ಥಿನಿ. ಸರಿತಾ ಜತೆ ಬೈಕ್ ನಲ್ಲಿ ತೆರಳುತ್ತಿದ್ದ ಇನ್ನೋರ್ವ ಯುವತಿ ಅನಿತಾ (20) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಸರಿತಾ ಹಾಗೂ ಅನಿತಾ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಂಗೇರಿ ವ್ಯಾಪ್ತಿಯ ನೈಸ್ ರಸ್ತೆ ಬಳಿ ಟಿಪ್ಪರ್ ಲಾರಿ ಬೈಕ್ ಹಿಂಬದಿಗೆ ಗುದ್ದಿದೆ. ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಚಾಲಕಿ ಸರಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅನಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ವಿದ್ಯರಥಿನಿಯರು ವಿಜಯನಗರ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿನಿ ಸರಿತಾ 6 ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟದ್ದರು. ವಿವಾಹದ ಬಳಿಕವೂ ಕಾಲೇಜಿನಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದರು. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.

*ಯಡಿಯೂರಪ್ಪರನ್ನು ಸೈಡ್ ಲೈನ್ ಮಾಡಿದ್ರಾ BJP ನಾಯಕರು? ; ಮಾಜಿ ಸಿಎಂ BSY ಹೆಳಿದ್ದೇನು?*

https://pragati.taskdun.com/b-s-yedyurappabjpsidelinekalaburgireaction/

Related Articles

Back to top button