
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಬಳಿ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಮರ ಬಿದ್ದಿದ್ದು, ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ