
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬಿಕ್ಲು ಶಿವ ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ, ಮತ್ತೊಂದೆಡೆ ಪ್ರಕರಣದ ಎ5 ಆರೋಪಿಯಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಸಾಕ್ಷ್ಯ ಪತ್ತೆಗೆ ಮುಂದಾಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹೆಗಲಿಗೆ ವಹಿಸಿ ಆದೇಶ ಹೊರಡಿಸಿದೆ.
ಆರೋಪಿ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ ಜನಪ್ರತಿನಿಧಿಗಳ ನ್ಯಾಯಾಲಯ ಈ ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ.