Kannada NewsKarnataka NewsLatestPolitics

*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಭೈರತಿ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದ ಭೈರತಿ ಬಸವರಾಜ್ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಭೈರತಿ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

2 ಲಕ್ಷ ರೂ.ಬಾಂಡ್, ಇಬ್ಬರು ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಿದ್ದು, ಕೆಲ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

Home add -Advt

Related Articles

Back to top button