
ಸಿಐಡಿ ಅಧಿಕಾರಿಗಳಿಂದ ತೀವ್ರ ಹುಡುಕಾಟ
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಬಂಧನ ಭೀತಿ ಶುರುವಾಗಿದೆ.
ಬಂಧನ ಭೀತಿಂದ ತಲೆ ಮರೆಸಿಕೊಂಡಿರುವ ಶಾಸಕರಿಗಾಗಿ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಬೈರತಿ ಬಸವರಾಜ್, ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾದತ್ತ ತೆರಳಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸಿಐಡಿ ಮೂರು ತಂಡಗಳು ಬೈರತಿ ಬಸವರಾಜ್ ಗಾಗಿ ಹುಡುಕಾಟ ನಡೆಸಿದ್ದಾರೆ. ಫೋನ್ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿರುವ ಶಾಸಕ ಯಾವುದೇ ಕ್ಷಣದಲ್ಲಿ ಬಂಧನಕ್ಕೀಡಾಗುವ ಸಾಧ್ಯತೆ ಇದೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಆರೋಪಿಗಳ ಜೊತೆ ಬೈರತಿ ಬಸವರಾಜ್ ನಿರಂತರ ಸಂಪರ್ಕದಲ್ಲಿದ್ದರು. ಪೊಲೀಸ್ ತನಿಖೆ ವೇಳೆ ಆರೋಪಿಗಳಿಗೂ ತನಗೂ ಸಂಪರ್ಕವಿಲ್ಲ ಎಂದು ಸುಳ್ಳು ಹೇಳಿದ್ದರು ಎಂಬುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ನಿರೀಕ್ಷಣ ಅಜಾಮೀನು ಅರ್ಜಿ ವಜಾಗೊಂಡಿತ್ತು.


