
ಪ್ರಗತಿವಾಹಿನಿ ಸುದ್ದಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ, ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್, ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದಾಗಿ ಘೋಷಿಸುವ ಮೂಲಕ ಟ್ರಂಪ್ ಗೆ ಸೆಡ್ಡು ಹೊಡೆದಿದ್ದಾರೆ.
ಒಂದು ಕಾಲದಲ್ಲಿ ಡೊನಾಲ್ಡ್ ಟ್ರಂಪ್ ಆಪ್ತಮಿತ್ರ ಮತ್ತು ಸಲಹೆಗಾರರಾಗಿದ್ದ ಬಿಲಿಯನೇರ್ ಎಲೋನ್ ಮಸ್ಕ್ ಈ ಟ್ರಂಪ್ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಎಲೋನ್ ಮಸ್ಕ್ ‘ಅಮೆರಿಕಾ ಪಾರ್ಟಿ’ ಎಂಬ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಪಕ್ಷವು ಅಮೆರಿಕದ ಜನರನ್ನು ಏಕಪಕ್ಷ ವ್ಯವಸ್ಥೆಯಿಂದ ಮುಕ್ತಗೊಳಿಸುತ್ತದೆ ಎಂದು ಮಸ್ಕ್ ಹೇಳಿದ್ದು, ಅವರ ಈ ಘೋಷಣೆಯ ನಂತರ ಅಮೆರಿಕದ ರಾಜಕೀಯದಲ್ಲಿ ಕೋಲಾಹಲ ಉಂಟಾಗಿದೆ.
ಅಮೆರಿಕದಲ್ಲಿ ಒಂದು ವೇಳೆ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಅನುಮೋದನೆ ಸಿಕ್ಕರೆ ಮರುದಿನವೇ ಹೊಸ ಪಕ್ಷವನ್ನು ಕಟ್ಟುವುದಾಗಿ ಎಲಾನ್ ಮಸ್ಕ್ ಅವರು ಟ್ರಂಪ್‌ಗೆ ಈ ಮೊದಲೇ ಎಚ್ಚರಿಕೆ ನೀಡಿದ್ದರು.