Belagavi NewsBelgaum NewsEducationKannada NewsKarnataka News
*ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬಿಮ್ಸ್ ವಿದ್ಯಾರ್ಥಿನಿಯ ಸಾಧನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವೈದ್ಯಕೀಯ ವಿಜ್ಞಾನ ಸಂಸ್ಥೆ ಕಲಬುರ್ಗಿ (ಜಿಮ್ಸ್) ನಲ್ಲಿ ಆಯೋಜಿಸಿದ್ದ “ಕಚ್ ಕಾನ್ – 2025 ” ಕರ್ನಾಟಕ ಸಮುದಾಯ ಆರೋಗ್ಯ ಸಂಘದ 35ನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಭಾಗವಹಿಸಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ.ಮಂಜುಳಾ ಅವರು ” ಪ್ರಪಂಚದಾದ್ಯಂತ ವಿಸ್ತರಿಸುತ್ತಿರುವ ಸಮುದಾಯ ವೈದ್ಯಕೀಯ ಕ್ಷೇತ್ರ ಭವಿಷ್ಯವನ್ನು ಅಪ್ಪಿಕೊಳ್ಳುವುದು” ಈ ವಿಷಯದ ಕುರಿತು ಮೌಖಿಕ ಪ್ರಸ್ತುತಿ ಸ್ಪರ್ಧೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನಕ್ಕೆ ಆಯ್ಕೆಯಾಗಿ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಪಡೆದುಕೊಂಡಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ಬಿಮ್ಸ್ ಗೆ ಕೀರ್ತಿ ತಂದಿರುವ ಡಾ. ಮಂಜುಳಾ ಅವರನ್ನು ಬಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ್ ಶೆಟ್ಟಿ,
ಮುಖ್ಯ ಆಡಳಿತ ಅಧಿಕಾರಿ ಡಾ. ಸಿದ್ದು ಹುಲ್ಲೋಳಿ, ಡಾ. ರಾಜಗೊಂಡ ವಿವೇಕಿ ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.



