*BREAKING: ಬಯೋಕಾನ್ ಕಂಪನಿ ಉದ್ಯೋಗಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ ಕಟ್ಟಡದ 5ನೇ ಮಹಡಿಯಿಂದ ಜಿಗಿದು ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಂತ ಭಟ್ (35) ಆತ್ಮಹತ್ಯೆಗೆ ಶರಣಾದ ಉದ್ಯೋಗಿ. ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. Home add -Advt *ಗ್ಯಾಸ್ ಗೀಸರ್ ಸೋರಿಕೆ: 20 ವರ್ಷದ ಯುವತಿ … Continue reading *BREAKING: ಬಯೋಕಾನ್ ಕಂಪನಿ ಉದ್ಯೋಗಿ ಆತ್ಮಹತ್ಯೆ*