
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ಆರ್ಭಟ ಜೋರಾಗಿದ್ದು, ರಾಜ್ಯದ ಕರಾವಾಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಕರಾವಳಿಗೆ ಎಚ್ಚರಿಕೆ ನೀಡಿದೆ.
ಮುಂದಿನ 5 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. ಪ್ರವಾಸಿಗರು, ಮೀನುಗರರು, ಸ್ಥಳೀಯರು, ಮಕ್ಕಳು ಎಚ್ಚರಿಕೆ ವಹಿಸಬೇಕು. ಅಲ್ಲದೇ ಯಾರೂ ಸಮುದ್ರ ತೀರಕ್ಕೆ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸುವಂತೆ ಕಟ್ಟೆಚ್ಚರಿಕೆ ಸೂಚಿಸಿದೆ.