ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ದೆಹಲಿಯ ಬ್ರಾರ್ ಸ್ವ್ಕೇರ್ ನಲ್ಲಿ ನಡೆದಿದ್ದು, ರಾವತ್ ದಂಪತಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ದೆಹಲಿ ನಿವಾಸದಿಂದ ಬ್ರಾರ್ ಸ್ಕ್ವೇರ್ ಗೆ ಬಿಪಿನ್ ರಾವತ್ ಹಾಗೂ ಮಧುಲಿಕಾ ದಂಪತಿಯ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಸಕಲ ಸರ್ಕಾರಿ ಗೌರಾವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಸೇನೆಯಿಂದ 17 ಸುತ್ತು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಲಾಯಿತು.
ಬಳಿಕ ಬಿಪಿನ್ ರಾವತ್ ಇಬ್ಬರು ಪುತ್ರಿಯರಾದ ಕೃತಿಕಾ ಹಾಗೂ ತಾರಿಣಿ ತಂದೆ-ತಾಯಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಅಂತ್ಯಕ್ರಿಯೆಯಲ್ಲಿ 800 ಜನರಿಗಷ್ಟೇ ಅವಕಾಶ ಮಾಡಿಕೊಡಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ