ಪ್ರಗತಿವಾಹಿನಿ ಸುದ್ದಿ; ಬೆಂಗಳೂರು/ಮಂಗಳೂರು; ಬಿಪರ್ ಜಾಯ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು, ದಕ್ಷಿಣ ಕನ್ನಡದ ಸೋಮೇಶ್ವರ ಕಡಲಿನಲ್ಲಿ ಬೃಹತ್ ಅಲೆಗಳು ಏಳುತ್ತಿದ್ದು, ಅಲೆಗಳ ಆರ್ಭಟಕ್ಕೆ ಕಡಲ ತಡಿಯ ಮನೆಗಳು ಕುಸಿದು ಬಿದ್ದಿವೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.
ಇನ್ನು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ