
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹಕ್ಕಿಜ್ವರ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಆಂತಕ ಮನೆ ಮಾಡಿದೆ. ಹಾಗಾಗಿ ಗಡಿಗಳಲ್ಲಿ ಚೆಕ್ ಪೊಸ್ಟ್ ಅಳವಡಿಸುವ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ.
ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೇರೆ ರಾಜ್ಯಗಳಿಂದ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಬೀದರ್, ಬೆಳಗಾವಿ, ಬಳ್ಳಾರಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಬೇರೆ ರಾಜ್ಯಗಳಿಂದ ಬರುವ ಕೋಳಿ ಹಾಗೂ ಮೊಟ್ಟೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ, ರಾಜ್ಯದಲ್ಲಿ ಹಕ್ಕಿಜ್ವರ ಇಲ್ಲದಿದ್ರೂ, ಬಿಸಿಲಿನ ತಾಪದ ಪರಿಣಾಮ ಕೋಳಿ ಮಾಂಸ ವ್ಯಾಪಾರ ಕಡಿಮೆಯಾಗಿದೆ.