
ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ
ಪ್ರಗತಿವಾಹಿನಿ ಸುದ್ದಿ: ಹಕ್ಕಿಜ್ವರ ದಿನದಿಂದ ದಿನಕ್ಕೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಹೆಚ್ಚಾಗುತ್ತಿದ್ದು, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದ 7 ಜಿಲೆಗಳಲ್ಲಿ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಹುಲಿ, ಚಿರತೆ, ಕಾಗೆಗಳಿಗೂ ಸೋಂಕು ತಗುಲಿದೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ H5H1 ಸೋಂಕು ಪೀಡಿತ ಕೋಳಿಗಳು ಸಾವನ್ನಪ್ಪುತ್ತಿವೆ. ಕೋಳಿ ಫಾರಂ ಗಳಲ್ಲಿ, ಚಿಕನ್ ಅಂಗಡಿಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಬೆಳಗಾವಿ, ಬೀದರ್, ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿನ ಮೇಲೆ ನಿಗಾ ಇಡಲಾಗಿದ್ದು, ಕೋಳಿ, ಮೊಟ್ಟೆಗಳ ಆಮದಿಗೆ ನಿಷೇಧ ಹೇರಲಾಗಿದೆ. ಹೊರ ರಾಜ್ಯಗಳಿಂದ ಬರುವ ಚಿಕನ್, ಮೊಟ್ಟೆಗಳನ್ನು ಖರೀದಸಂತೆ ಸೂಚಿಸಲಾಗಿದೆ.
ಹಕ್ಕಿ ಜ್ವರದಿಂದ ಸಾವನ್ನಪ್ಪುತಿರುವ ಕೋಳಿಗಳನ್ನು ಮಣ್ಣುಮಾಡದೇ ನದಿಗಳಿಗೆ ಎಸೆಯಲಾಗುತ್ತಿದ್ದು, ಇದರಿಂದ ಮೀನುಗಳಿಗೂ ಸೋಂಕು ಪೀಡತರಾಗುವ ಸಾಧ್ಯತೆ ಇದೆ. ಮೀನು ಸೇವಿಸುವ ಜನರ ಆರೋಗ್ಯ ಹದಗೆಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಗರಸಭೆ, ಪುರಸಭೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಜ್ವರ, ಕೆಮ್ಮು, ಗಂಟಲು ನೋವು, ಸ್ನಾಯು ನೋವು, ವಾಂತಿಬೇಧಿ, ನೆಗಡಿ, ಉಸಿರಾಟದ ತೊಂದರೆ ಹಕ್ಕಿಜ್ವದ ಲಕ್ಷಣಗಳಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ