ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹಿರಿಯ ಅಧಿಕಾರಿಯೊಬ್ಬರು ವಿವಾಕ್ಕೆ ಸಿಲುಕಿದ್ದಾರೆ. ಸರಕಾರಿ ನಿಯಮವನ್ನು ಮೀರಿ ಕಚೇರಿಯಲ್ಲೇ ಹುಟ್ಟುಹಬ್ಬ ಆಚರಿಸಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಾವೇರಿ ನೀರಾವರಿ ನಿಗಮ (ಸಿಎನ್ ಎನ್) ದ ವ್ಯವಸ್ಥಾಪಕ ನಿರ್ದೇಶಕ ಕೆ.ಜೈಪ್ರಕಾಶ್ ತಮ್ಮ ಕಚೇರಿಯಲ್ಲೇ ಕೇಕ್ ಕತ್ತರಿಸಿ, ಸಂಭ್ರಮಿಸಿದ್ದಾರೆ. ಇದರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದುತ್ತಿವೆ.
ಸರಕಾರದ ನಿಯಮಾವಳಿ ಪ್ರಕಾರ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ. ಈಗ ಕೋವಿಡ್ -19 ಸಮಯವಾದರೂ ಯಾವುದೇ ಮಾಸ್ಕ್ ಕೂಡ ಧರಿಸದೆ, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದೆ ಹುಟ್ಟು ಹಬ್ಬ ಆಚರಿಸಲಾಗಿದೆ.
ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಈ ಕುರಿತು ಏನು ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ