ಭಾನುವಾರ ಸಂಸದ ಜೊಲ್ಲೆ ಜನ್ಮದಿನ: ಪ್ರತಿಭಾವಂತರಿಗೆ ಬಹುಮಾನ ವಿತರಣೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಚಿಕ್ಕೋಡಿ ಸಂಸದ, ಜೊಲ್ಲೆ ಗ್ರುಪ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾಗಿರುವ ಅಣ್ಣಾಸಾಹೇಬ ಜೊಲ್ಲೆ ಅವರ ೬೧ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಪಟ್ಟಣದ ಆರ್ ಡಿ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ ೮ ರಂದು ಬೆಳಿಗ್ಗೆ ೧೧ ಗಂಟೆಗೆ ಆಯೋಜನೆ ಮಾಡಲಾಗಿoz.
ಇದೇ ಸಂದರ್ಭದಲ್ಲಿ ಟ್ಯಾಲೆಂಟ್ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿಭಾನ್ವಿತರಿಗೆ ಬಹುಮನ ವಿತರಣೆ ಸಹ ನಡೆಯಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಲ್ಹಾಪುರದ ಕನೇರಿಯ ಸಿದ್ಧಸಂಸ್ಥಾನಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ನಿಡಸೋಶಿಯ ಸಿದ್ಧಸಂಸ್ಥಾನಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಚಿಂಚಣಿಯ ಸಿದ್ಧಸಂಸ್ಥಾನಮಠದ ಅಲ್ಲಮಪ್ರಭು ಸ್ವಾಮೀಜಿ, ಚಿಕ್ಕೋಡಿಯ ಚರಮೂರ್ತಿ ಮಠದ ಸಂಪಾದನ ಸ್ವಾಮೀಜಿ ವಹಿಸುವರು.
ಅಧ್ಯಕ್ಷತೆಯನ್ನು ಹುಟ್ಟು ಹಬ್ಬ ಆಚರಣೆ ಸಮಿತಿಯ ಅಧ್ಯಕ್ಷರು ಆಗಿರುವ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ವಹಿಸುವರು. ಮುಖ್ಯ ಅತಿಥಿಗಳಾಗಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಹುಕ್ಕೇರಿ ಶಾಸಕ ನಿಖಿಲ ಕತ್ತಿ, ಮಾಜಿ ಸಂಸದ ರಮೇಶ ಕತ್ತಿ, ಮಾಜಿ ವಿಧಾನ ಪರಿ?ತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಸಚಿವ ಶ್ರೀಮಂತ ಪಾಟೀಲ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ಪಿ.ರಾಜೀವ್, ಯುವ ಧುರೀಣ ಬಸವರಾಜ ಹುಂದ್ರಿ, ಮಾರುತಿ ಅಷ್ಟಗಿ ಸೇರಿದಂತೆ ಹಲವರು ಭಾಗವಹಿಸುತ್ತಾರೆ ಎಂದು ಹುಟ್ಟುಹಬ್ಬ ಆಚರಣೆ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ