Kannada NewsKarnataka NewsLatest
BREAKING: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ; ಅಕ್ಕಿ ಬದಲು ಹಣ ನೀಡಲು ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನ್ನಭಾಗ್ಯ ಅಕ್ಕಿ ಯ್ಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಕ್ಕಿ ಕೊರತೆಯಾಗಿದೆ. ಈ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲು ಬಿಪಿಎಲ್ ಫಲಾನುಭವಿಗಳಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿಗೆ 34 ರೂಪಾಯಿಯಂತೆ ಜುಲೈ ತಿಂಗಳಿಂದಲೇ ಖಾತೆಗೆ ಹಣ ಹಾಕಲಾಗುವುದು ಎಂದು ಹೇಳಿದರು.
ಅಂದರೆ 5 ಕೆಜಿ ಅಕ್ಕಿ ಬದಲು 170 ರೂಪಾಯಿ ಪ್ರತಿ ಪಡಿತರದಾರರ ಖಾತೆಗೆ ನೀಡಲಾಗುವುದು. ಅಕ್ಕಿ ಸಿಗುವವರೆಗೆ ಹಣ ಹಾಕುತ್ತೇವೆ. ಅಕ್ಕಿ ಸಿಕ್ಕ ಬಳಿಕ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಹೇಳಿದರು.