ಬುಟ್ಟಿಯಲ್ಲಿ ಹಾವಿದೆ ಬಿಡ್ತೀವಿ ಅಂತಾ ಯಾರಿಗೆ ಹೆದರಿಸ್ತಿದ್ದೀರಿ? ಕಾಂಗ್ರೆಸ್ ನಾಯಕರಿಗೆ ಅರಗ ಜ್ಞಾನೇಂದ್ರ ತಿರುಗೇಟು
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಕಾಂಗ್ರೆಸ್ ನಾಯಕರ ಬಳಿ ಇರುವ ದಾಖಲೆಗಳನ್ನು ನೀಡಲಿ ಆರೋಪಿಗಳ ವಿರುದ್ಧ ತನಿಖೆ ನಡೆಸಿ ಶಿಕ್ಷೆ ಕೊಡಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, 2018ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಶಾಸಕನ ಮಕ್ಕಳ ಜೊತೆ ಶ್ರೀಕಿ ಸಿಕ್ಕಿ ಹಾಕಿಕೊಂಡಿದ್ದ. ಕೇವಲ ಚಾರ್ಜ್ ಶೀಟ್ ನಲ್ಲಿ ಆತನ ಹೆಸರು ಸೇರಿಸಿ ಕೈಬಿಟ್ಟಿದ್ದರು ಹೊರತು ಬಂಧಿಸಿರಲಿಲ್ಲ. ಯುಬಿ ಸಿಟಿ ಗಲಾಟೆ ವೇಳೆ ಕಾಂಗ್ರೆಸ್ ನಾಯಕರ ಮಕ್ಕಳ ಜೊತೆ ಶ್ರೀಕಿ ಇದ್ದ. ಅವರದ್ದೇ ಸರ್ಕಾರವಿದ್ದರೂ ಯಾಕೆ ಆತನ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ? ಈಗ ನಮ್ಮ ಸರ್ಕಾರದ ಅವಧಿಯಲ್ಲಿ ಶ್ರೀಕಿಯನ್ನು ಬಮ್ಧಿಸಲಾಗಿದೆ.
ಯುಬಿ ಸಿಟಿ ಗಲಾಟೆ ವೇಳೆ ಕಾಂಗ್ರೆಸ್ ನಾಯಕರ ಮಕ್ಕಳಿದ್ದರು. ಅವರೊಂದಿಗೆ ಶ್ರೀಕಿ ಕೂಡ ಇದ್ದ. ಅಂದು ಕಾಂಗ್ರೆಸ್ ನಾಯಕರ ಮಕ್ಕಳು ಯಾಕೆ ಇದ್ದರು? ಇದನ್ನು ಜನರ ಮುಂದೆ ಕಾಂಗ್ರೆಸ್ ನಾಯಕರು ಹೇಳಲಿ. ಕಾಂಗ್ರೆಸ್ ನವರು ಬುಟ್ಟಿಯಲ್ಲಿ ಹಾವಿದೆ ಬಿಡ್ತೀವಿ ಅಂತ ಹೇಳ್ತಿದ್ದಾರೆ. ಯಾರಿಗೆ ಹೆದರಿಸುತ್ತಿದ್ದಾರೆ? ಅವರು ಹಾವು ಬಿಡಲಿ… ಎಷ್ಟು ದೊಡ್ಡದು, ಅದು ಯಾರಿಗೆ ಕಚ್ಚುತ್ತೆ? ಯಾರು ಸಾಯ್ತಾರೆ ಎಂಬುದನ್ನು ನೋಡೋಣ ಎಂದು ತಿರುಗೇಟು ನೀಡಿದರು.
ಬಿಟ್ ಕಾಯಿನ್ ಹಗರಣ; ಸಿಎಂ ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ