ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಂಟರ್ ನ್ಯಾಷನಲ್ ಹ್ಯಾಕರ್ ನನ್ನು ಎಸ್ ಐಟಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಪಂಜಾಬ್ ಮೂಲದ ರಾಜೇಂದ್ರ ಸಿಂಗ್ ಬಂಧಿತ ಆರೋಪಿ. ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿಗೂ ಮೊದಲೇ ಹ್ಯಾಕಿಂಗ್ ನಲ್ಲಿ ಪಳಗಿದ್ದ ಈತ ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ನ್ನು ಹ್ಯಾಕ್ ಮಾಡುತ್ತಿದ್ದ. ಶ್ರೀಕಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದ ವೇಳೆ ಈ ನಟೋರಿಯಸ್ ಹ್ಯಾಕರ್ ಬಗ್ಗೆ ಗೊತ್ತಾಗಿತ್ತು.
ರಾಜೇಂದ್ರ ಸಿಂಗ್ ಗಾಗಿ ಕೇಂದ್ರ ತನಿಖಾ ತಂಡಗಳು ಹುಡುಕಾಟ ನಡೆಸಿದ್ದವು. ಸಧ್ಯ ರಾಜೇಂದ್ರ ಸಿಂಗ್ ನನ್ನು ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದ ತಂಡ ಪಂಜಾಬ್ ನಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ.
ರಾಜೇಂದ್ರ ಸಿಂಗ್ ಬಂಧನದಿಂದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಬಯಲಾಗಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ