Kannada NewsKarnataka NewsLatest

*ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ಗೆ ED ಮತ್ತೊಂದು ಶಾಕ್*

ಪ್ರಗತಿವಾಹಿನಿ ಸುದ್ದಿ: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಎರಡನೇ ಬಾರಿ ಸಮನ್ಸ್ ಜಾರಿ ಮಾಡಿದೆ.

ನಾಳೆ ಜೂನ್ 1ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. ಶುಕ್ರವಾರ ವಿಚಾರಣೆಗೆ ಹಾಜರಾಗಿವಂತೆ ಈ ಹಿಂದೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ರಾಜಕೀಯ ಬೆಳವಣಿಗೆಗಳಿಂದಾಗಿ ವಿಚಾರಣೆಗೆ ವಿನಾಯಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಳೆ ಜೂನ್ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಬಿಟ್ ಕಾಯಿನ್ ಹಗರಣದಲ್ಲಿ ಈಗಾಗಲೇ ಮೂವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button