ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಅಂದಿನ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಗೆ ನೋಟಿಸ್ ನಿಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ, ಸಂದೀಪ್ ಪಾಟೀಲ್ ಗೆ ನೋಟಿಸ್ ನೀಡಿದೆ. ಹಿಂದಿನ ವಿಚಾರಣೆಗೆ ಗೈರಾದ ಬಗ್ಗೆಯೂ ಸೂಕ್ತ ವಿವರಣೆ ನೀಡುವಂತೆ ತಿಳಿಸಲಾಗಿದೆ.
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್ಐಟಿ ರಚನೆ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ 2023ರಲ್ಲಿ ಆದೇಶ ಹೊರಡಿಸಿತ್ತು. ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಇದೀಗ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಬಂದಿಸಿ ವಿಚಾರಣೆ ನಡೆಸಿದ್ದಾರೆ.
ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದ ಸಂದರ್ಭದಲ್ಲಿ ಐಜಿಪಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ