ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಲಾಗಿದೆ.
ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿದೆ. ವಿಚಾರಣೆ ವೇಳೆ ಪ್ರಮುಖ ಆರೋಪಿ ಶ್ರೀಕಿ ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದು, ಇದೀಗ ಆತನಿಗೆ ಕೊಲೆ ಬೆದರಿಕೆ ಇದೆಯಂತೆ. ಪೊಲೀಸರ ಕೈಗೂ ಸಿಗದೇ ಶ್ರೀಕಿ ತಪ್ಪಿಸಿಕೊಂಡು ಓಡಾಡುತ್ತಿದ್ದಾನೆ. ಹೀಗಾಗಿ ಶ್ರೀಕಿಗೆ ಎಸ್ ಐಟಿ, ಗನ್ ಮ್ಯಾನ್ ನೀಡಿದೆ.
ಬಿಟ್ ಕಾಯಿನ್ ಹಗರಣದಲ್ಲಿ ಕೆಲ ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎನ್ನಲಾಗುತ್ತಿದೆ. ಅಂತರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಳಸಿಕೊಂಡು ರಾಜಕಾರಣಿಗಳು ಬಿಟ್ ಕಾಯಿನ್ ಹಗರಣವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಟ್ಟಾರೆ ಪ್ರಕರಣದ ತನಿಖೆ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ