
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಬಿಟ್ ಕಾಯಿನ್ ದಂಧೆ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ 5 ಸ್ಟಾರ್ ಹೊಟೆಲ್ ನಲ್ಲಿ ಆರೋಪಿ ಶ್ರೀಕೃಷ್ಣನನ್ನು ಬಂಧಿಸಲಾಗಿದೆ. ಆರೋಪಿ ಶ್ರೀಕಿ ತಂಗಿದ್ದ ಹೋಟೆಲ್ ನಲ್ಲಿ ವಿಷ್ಣು ಭಟ್ ಎಂಬಾತ ಶ್ರೀಕಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದ. ಗಲಾಟೆ ಬಗ್ಗೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿದ ಜೀವನ್ ಭೀಮಾ ನಗರ ಪೊಲೀಸರು ಶ್ರೀಕಿ ಹಾಗೂ ವಿಷ್ಣು ಭಟ್ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀಕಿ ಎರಡು ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಳಿಕ ನಾಪತ್ತೆಯಾಗಿದ್ದ ಶ್ರೀಕಿ ಇದೀಗ 5 ಸ್ಟಾರ್ ಹೋಟೆಲ್ ನಲ್ಲಿ ಸೆರೆ ಸಿಕ್ಕಿದ್ದಾನೆ. ಕಳೆದ ಎರಡು ತಿಂಗಳಿಂದ ಆರೋಪಿ ಶ್ರೀಕಿ ಆರ್ಚಿಡ್ 5 ಸ್ಟಾರ್ ಹೋಟೆಲ್ ನಲ್ಲೇ ತಂಗಿದ್ದ ಎನ್ನಲಾಗಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ