ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೊಬ್ಬ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ.
ಲಕ್ಷ್ಮೀಕಾಂತಯ್ಯ ಬಂಧಿತ ಇನ್ಸ್ ಪೆಕ್ಟರ್. ಲಕ್ಷ್ಮೀಕಾಂತಯ್ಯ ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಕೆಲ ಹೊತ್ತಲ್ಲೇ ಬಂಧಿತ ಇನ್ಸ್ ಪೆಕ್ಟರ್ ಲಕ್ಷ್ಮಿಕಾಂತಯ್ಯರನ್ನು ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ.
ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆರೋಪಿ ಡಿವೈ ಎಸ್ ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಎಸ್ಕೇಪ್ ಆದ ಘಟನೆ ಫೆ.27ರಂದು ಬೆಂಗಳೂರಿನ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿತ್ತು. ಸಿಐಡಿ ಎಸ್ ಐಟಿ ಇನ್ಸ್ ಪೆಕ್ಟರ್ ಅನಿಲ್ ಹಾಗೂ ಅವರ ತಂಡ ಬಂಧಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿತ್ತು. ಶ್ರೀಧರ್ ಪೂಜಾರ್ ವಿರುದ್ಧ 307 ಅಡಿ ಕೊಲೆ ಯತ್ನ, 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ವಿಧಾನಸೌಧ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ