Latest

61,49,536 ಸೋಂಕಿತರು ಕೊರೊನಾದಿಂದ ಗುಣಮುಖ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 66,732 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 71,20,539 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 816 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,09,150ಕ್ಕೆ ಏರಿಕೆಯಾಗಿದೆ.

Home add -Advt

ದೇಶದಲ್ಲಿ 8,61,853 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 61,49,536 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ9,94,851 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 8,78,72,093 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

Related Articles

Back to top button