Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರು ಮೂಲದ ಶಕುಂತಲಾ ನಟರಾಜ್ ಎಂಬ ಬಿಜೆಪಿ ಕಾರ್ಯಕರ್ತೆ ಸಿಎಂ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿಚಾರವಾಗಿ ಸಿಎಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಕುಂತಲಾ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಬಿಜೆಪಿ ಕಾರ್ಯಕರ್ತೆ ಶಕುಂತಾಲಾಳನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

Home add -Advt

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತೀಕರಣ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವರ ವಿಡಿಯೋವನ್ನು ಇದೇ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಪ್ರಶ್ನಿಸಿ ಸಿದ್ದರಾಮಯ್ಯನವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ


Related Articles

Back to top button