
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಕೊನೆಗೂ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.
ಪ್ರೊ ಎಂ.ನಾಗರಾಜ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಹಾಗೆಯೇ, ವಿಧಾನಪರಿಷತ್ಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ಟಿಕೆಟ್ ನೀಡಿದೆ.
ಹಲವು ದಿನಗಳ ಗೊಂದಲದ ಬಳಿಕ ಕೊನೆಗೂ ರಾಜ್ಯಸಭೆ ಹಾಗೂ ವಿಧಾನಪರಿಷತ್ ಅಭ್ಯರ್ಥಿಗಳ ಹೆಸರುಗಳು ಹೊರಬಿದ್ದಿವೆ.
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಮತ್ತೆ ರಾಜ್ಯಸಭೆ ಸ್ಥಾನ ನೀಡಲಾಗುತ್ತಿದೆ ಎಂಬ ಚರ್ಚೆಗಳು ಬಲವಾಗಿ ಕೇಳಿಬಂದಿದ್ದವು. ಅಲ್ಲದೆ, ರಾಜ್ಯ ಬಿಜೆಪಿ ಡಿ.ವಿ.ಸದಾನಂದ ಗೌಡ ಹಾಗೂ ಮಾಜಿ ಶಾಸಕ ನಿರ್ಮಲ ಕುಮಾರ್ ಸುರಾನ ಹೆಸರುಗಳನ್ನು ಸಹ ಹೈಕಮಾಂಡ್ಗೆ ಕಳುಹಿಸಿದೆ ಎನ್ನಲಾಗಿತ್ತು. ಆದರೆ ಹೈಕಮಾಂಡ್ ಇವೆಲ್ಲರನ್ನೂ ಬಿಟ್ಟು ಪ್ರೊ ಎಂ.ನಾಗರಾಜ್ ಅವರಿಗೆ ಮಣೆ ಹಾಕಿದೆ.




