Election NewsKannada NewsNationalPolitics

*ಮತದಾನ ಮಾಡಿದ ಮಾರನೇ ದಿನವೇ ಹೃದಯಘಾತದಿಂದ ಬಿಜೆಪಿ ಅಭ್ಯರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಮಾರನೇ ದಿನವೇ ಬಿಜೆಪಿ ಅಭ್ಯರ್ಥಿ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.‌

ಮೊದಲ ಹಂತದ ಚುನಾವಣೆಯಾಗಿ ಮೊರಾದಾಬಾದ್‌ನಲ್ಲಿ ಶುಕ್ರವಾರ ಮತದಾನ ನಡೆದಿತ್ತು. ಲಕ್ಕೋನ ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಸರ್ವೇಶ್ ಸಿಂಗ್ ಮತದಾನ ಮಾಡಿದ ಮಾರನೇ ದಿನವೇ ಮೃತಪಟ್ಟಿದ್ದಾರೆ.

ಅವರು ಮಾರ್ಚ್ ತಿಂಗಳಲ್ಲಿ ಹಲ್ಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ಅಸ್ವಸ್ಥರಾಗಿದ್ದರು. ಶುಕ್ರವಾರ ಅವರು ತಮ್ಮ ಹುಟ್ಟೂರಾದ ರತುಪುರ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದರು. ಶನಿವಾರ ಬೆಳಗ್ಗೆ ಅವರನ್ನು ಚಿಕಿತ್ಸೆಗಾಗಿ ಏಮ್ಸ್‌ಗೆ ಕರೆದೊಯ್ಯಲಾಗಿತ್ತು. ಆದರೆ ಶಾನಿವಾರ ಸಾಯಂಕಾಲ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ

ಸರ್ವೇಶ್ ಸಿಂಗ್ 1991 ರಲ್ಲಿ ಬಿಜೆಪಿ (BJP) ಟಿಕೆಟ್‌ನಲ್ಲಿ ಠಾಕುರ್ದ್ವಾರ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2009ರಲ್ಲಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ವಿರುದ್ಧ ಸುಮಾರು 50 ಸಾವಿರ ಮತಗಳಿಂದ ಸೋತಿದ್ದರು. 2014ರಲ್ಲಿ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಇದಕ್ಕೂ ಮೊದಲು ಅವರು ಜಿಲ್ಲೆಯ ಠಾಕುರ್ದ್ವಾರ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button