ಪ್ರಗತಿವಾಹಿನಿ ಸುದ್ದಿ, ನವದೆಹಲಿ:
ಇಂಗ್ಲೆಂಡ್ ಕಂಪನಿಯೊಂದರ ನೊಂದಣಿ ವೇಳೆ ರಾಹುಲ್ ಗಾಂಧಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಾವು ಬ್ರಿಟೀಶ್ ಪೌರತ್ವ ಪಡೆದಿರುವುದಾಗಿ ಉಲ್ಲೇಖಿಸಿದ್ದು, ಅವರ ನಾಮಪತ್ರ ತಿರಸ್ಕರಿಸಬೇಕೆಂದು ಅಮೇಥಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಧ್ರುವಲಾಲ್ ಎನ್ನುವವರು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಮೇಥಿಯ ನಾಮಪತ್ರ ಪರಿಶೀಲನೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಭಾರತೀಯರಲ್ಲದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಇಲ್ಲ ಎಂದಾದ ಮೇಲೆ, ರಾಹುಲ್ ಗಾಂಧಿ ನಾಮಪತ್ರ ಸ್ವೀಕಾರಾರ್ಹವಲ್ಲ ಎಂದು ಪಕ್ಷೇತರ ಅಭ್ಯರ್ಥಿ ಧ್ರುವ ಲಾಲ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಹಾಗಾಗಿ ನಾಮಪತ್ರ ಪರಿಶೀಲನೆಯನ್ನು ಮುಂದೂಡಲಾಗಿದ್ದು, ರಾಹುಲ್ ಗಾಂಧಿ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಎದುರಾಗಿದೆ.



