Belagavi NewsBelgaum NewsElection NewsKannada NewsKarnataka NewsPolitics

*ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್*

2 ಲಕ್ಷ ಮತಗಳ ಅಂತರದಿಂದ ಶೆಟ್ಟರ್ ಗೆಲುವು; ಮಾಜಿ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಮೆರವಣಿಗೆ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಮೆರವಣಿಗೆ ನಡೆಸಿದರು.

ಬುಧವಾರ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯು ಖಡೇಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿತು.‌ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮೆರವಣಿಗೆ ವಾಹನ ಏರಿದಾಗ ಅಭಿಮಾನಿಗಳು ಜಯ ಘೋಷಣೆ ಹಾಕಿದರು. ವಿವಿಧ ಭಾಗದಿಂದ ಬಂದಿದ್ದ ಕಾರ್ಯಕರ್ತರು ಮೋದಿ ಮೋದಿ ಎಂಬ ಘೋಷಣೆಯೊಂದಿಗೆ ಉತ್ಸಾಹದಿಂದ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆಯಲ್ಲಿ ಗಮನ ಸೇಳೆದ ವಿವಿಧ ವಾದ್ಯಗಳು

ಜಗದೀಶ್ ಶೆಟ್ಟರ್ ಅವರು ನಾಮಪತ್ರಸಲ್ಲಿಸುವ ಮುಂಚೆ ಢೋಲ್ ತಾಶ್, ಡೊಳ್ಳು ಕುಣಿತ ವಾದ್ಯಗಳು ಎಲ್ಲರ ಗಮನ ಸೇಳೆದರು.‌ ವಿವಿಧ ಭಾಗದಿಂದ ಬಂದಿದ ಜನರು ವಾದ್ಯಗಳೊಂದಿಗೆ ಕುಣಿದು ಕುಪ್ಪಳಿಸಿದರು.‌ ಕೇಸರಿ ಪೇಟ ಧರಿಸಿದ ಮಹಿಳೆಯರು ಮೆರವಣಿಗೆಯಲ್ಲಿ ಗಮನ ಸೆಳೆದರು.‌

ನಾಮಪತ್ರ ಸಲ್ಲಿಕೆಗೆ ನಾಯಕರ ಸಾಥ್

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ ಸಾವಂತ್, ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನಂಮತ್ ನೀರಾಣಿ. ಮಾಜಿ ಶಾಸಕರಾದ ಅನೀಲ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.‌

ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಗೆಲುವು ಸಾಧಿಸಲಿದ್ದಾರೆ. ಸಾಕಷ್ಟು ಸಂಖ್ಯೆಯಲ್ಲಿ ಜನ ಬಂದಿರುವುದು ನೋಡಿದರೆ ಶೆಟ್ಟರ್ ಆಯ್ಕೆ ಖಚಿತ ಎಂದರು.


ಗೋವಾ ಸಿಎಂ ಪ್ರಮೋದ್ ಸಾವಂತ ಮಾತನಾಡಿದರು. ಅಬ್ ಕೀ ಬಾರ್ ಚಾರ್ ಸೌ ಪಾರ್ ಮಾಡಲು ಬೆಳಗಾವಿ ಲೋಕಸಭಾ ಚುನಾವಣೆಯಿಂದ ಅತೀ ದೊಡ್ಡ ಅಂತರದಲ್ಲಿ ಗೆಲ್ಲಿಸಿಕೊಂಡು ಬರಬೇಕು‌. ಕೇಂದ್ರದಲ್ಲಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ರಚನೆಯಾಗಲಿದೆ. ಕರ್ನಾಟಕದಲ್ಲಿಯೂ ಡಬಲ್ ಎಂಜಿನ್ ಸರಕಾರವಾಗಲಿದೆ ಎಂದರು‌.


ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ, ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುವುದು ನಿಶ್ಚಿತ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿಸುವುದು ದಾಖಲಾಗಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button