Latest

*ಕೆಲವೇ ಕ್ಷಣಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕೆಲ ಕ್ಷೇತ್ರಗಳಲ್ಲಿ ಬದಲಾವಣೆ ಸುಳಿವು ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವರಿಷ್ಠರೊಂದಿಗಿನ ಹಲವು ಸುತ್ತಿನ ಸಭೆ, ಮಾತುಕತೆಗಳ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Home add -Advt

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಲವಾರು ಸುತ್ತಿನ ಸಭೆ ಬಳಿಕ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸದಲ್ಲಿದ್ದಾರೆ. ಅವರು ಬಂದ ತಕ್ಷಣ ಅವರ ಜೊತೆ ಮಾತುಕತೆ ಬಳಿಕ ಅತಿಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಎರಡು ಹಂತಗಳಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ. ಮೊದಲ ಪಟ್ಟಿ ದೊಡ್ಡದಿರಲಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಪಟ್ಟಿ ಬಿಡುಗಡೆಯಾಗಬಹುದು ಎಂದು ಹೇಳಿದರು.

ಇನ್ನು ಈಗಾಗಲೇ ಕೆಲ ಕ್ಷೇತ್ರಗಳಲ್ಲಿ ಕೆಲ ನಾಯಕರು ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ. ಆ ಕ್ಷೇತ್ರದಲ್ಲಿ ಕೆಲ ಬದಲಾವಣೆಯಾಗಲಿದೆ. ಬಿಜೆಪಿ ಎಲ್ಲದರಲ್ಲಿಯೂ ಹೊಸತನವನ್ನು ತರುತ್ತದೆ. ಇದೇ ಬಿಜೆಪಿಗೂ ಹಾಗೂ ಬೇರೆ ಪಕ್ಷಗಳಿಗೂ ಇರುವ ವ್ಯತ್ಯಾಸ ಎಂದರು.

https://pragati.taskdun.com/no-ticket-for-lakshmana-savadi-cm-bommai-hints/

https://pragati.taskdun.com/vidhanasabh-electionanand-singhsonsiddharthbjp-ticket/

Related Articles

Back to top button