LatestUncategorized

*ಬಾಕಿ ಉಳಿದ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಸೇರಿದಂತೆ ಬಾಕಿ ಉಳಿದ ಕ್ಷೇತ್ರಗಳಿಗೆ ಇಂದೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ನವಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜೋಶಿ, ಉಳಿದ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ ಎಂದರು.

ಶೀಘ್ರದಲ್ಲಿಯೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಚುನಾವಣಾ ರ್ಯಾಲಿ ನಡೆಯಲಿದೆ. ಯಾವೆಲ್ಲ ಕ್ಷೇತ್ರಗಳಲ್ಲಿ ರ್ಯಾಲಿ ನಡೆಯಲಿದೆ ಎಂಬುದು ಏಪ್ರಿಲ್ 12ರಂದು ಫೈನಲ್ ಆಗಲಿದೆ ಎಂದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಬಾರದಿತ್ತು. ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಪಕ್ಷ ಬಲಪಡಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಇರುತ್ತೇವೆ ಎಂದು ಹೇಳಿದರು.

Home add -Advt
https://pragati.taskdun.com/v-somannanominationvarunacm-basavaraj-bommai/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button