LatestUncategorized

*ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ; ಮಾಜಿ ಸಿಎಂ ಶೆಟ್ಟರ್ ಮಹತ್ವದ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನವಣೆಗೆ ಒಂದು ತಿಂಗಳು ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ಸುತ್ತಿನ ಮಾತುಕತೆ ನಡೆಸಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದೇ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಇಂದು ರಾತ್ರಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ನಮ್ಮ ಪಟ್ಟಿ ಬಿಡುಗಡೆಯಾಗುತ್ತಿದೆ ಎಂದರು.

ಇಲ್ಲಿ ವಿಳಂಬ ಅನ್ನುವ ಪ್ರಶ್ನೆ ಇಲ್ಲ. ಈ ಹಿಂದಿನ ಚುನಾವಣೆಯಲ್ಲಿಯೂ ಚುನಾವಣಾ ದಿನಾಂಕ ಘೋಷಣೆ ಬಳಿಕವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲವೂ ಫೈನಲ್ ಆಗಿ ಇಂದು ರಾತ್ರಿ ಬಿಡುಗಡೆಯಾಗಬಹುದು ಎಂದು ಹೇಳಿದರು.


https://pragati.taskdun.com/siddaramaiahreactionpm-narendra-modisafari/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button