LatestUncategorized

*BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿಯಿದ್ದು, ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡಿಗಡೆಗೆ ಮುಹೂತ್ಸ ಫಿಕ್ಸ್ ಮಾಡಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅಂದೇ ಅಭ್ಯರ್ಥಿಗಳ ಪಟ್ಟಿ ಬಿಡಿಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಬಿಜೆಪಿ ಗೆಲ್ಲುವ ಪಕ್ಷವಾಗಿರುವುದರಿಂದ ಟಿಕೆಟ್ ಗಾಗಿ ಪೈಪೋಟಿ ಸಾಮಾನ್ಯ ಎಂದರು.

ಇನ್ನು ಅಥಣಿ ಟಿಕೆಟ್ ಗಾಗಿ ಮಹೇಶ್ ಕುಮಟಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವೆ ಫೈಟ್ ವಿಚಾರವಾಗಿ ಮಾತನಾಡಿದ ಸಿಎಂ, ನಾನು ಈಗಾಗಲೇ ಮಹೇಶ್ ಕುಮಟಳ್ಳಿ ಜೊತೆ ಮಾತನಾಡಿದ್ದೇನೆ ಎಂದು ಹೇಳಿದರು.

Home add -Advt
https://pragati.taskdun.com/karnatakaheavy-rainimd/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button