Kannada NewsKarnataka NewsPolitics

ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡು ತನ್ನ ಹೇಳಿಕೆ ಅಳಿಸಿ ಹಾಕಿದ ಬಿಜೆಪಿ: CM ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿ ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ  ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು.

ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ.

ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲ.

Home add -Advt

https://meet.google.com/call?authuser=0&hl=en-GB&mc=IAEoAjABaACiAS0aAhAAMgJQADoCEAFKBAgBEAFaAggAagIIAXoCCAKIAQGSAQIQAZoBBBgBIACyAQcYAyAAKgEwwgECIAHYAQE&origin=https%3A%2F%2Fmail.google.com&iilm=1715164695699

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button