Kannada NewsKarnataka NewsPolitics

*ಸಿದ್ದರಾಮಯ್ಯ ಅವರೆ ಸಿಎಂ ಆಗಿ ಮುಂದುವರಿಯಲಿದ್ದಾರೆ: ಡಾ. ಜಿ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಪರಮೇಶ್ವರ್ ಅವರು, ಪಕ್ಷದ ಆಂತರಿಕ ವಿಚಾರಗಳು ಮತ್ತು ಸರ್ಕಾರದ ಸ್ಥಿರತೆಯ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Home add -Advt

ಇನ್ನು ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಅತೃಪ್ತಿ ಇಲ್ಲ ಮತ್ತು ಆಡಳಿತ ಸುಸೂತ್ರವಾಗಿ ನಡೆಯುತ್ತಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ವಿರೋಧ ಪಕ್ಷಗಳು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿವೆ ಎಂದು ಆರೋಪಿಸಿದ ಅವರು, ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ. ಸರ್ಕಾರದ ಅವಧಿಯ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದಿದ್ದಾರೆ.

ಹೀಗಾಗಿ ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿಗಳ ಬದಲಾವಣೆಯ ಯಾವುದೇ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ ಎಂದು ಪರಮೇಶ್ವರ್ ಅವರು ಸ್ಪಷ್ಟಪಡಿಸಿರುವುದು. 

ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಸಂಘಟನೆ ಮತ್ತು ಬಲವರ್ಧನೆಯ ದೃಷ್ಟಿಯಿಂದ ಮಾತನಾಡಿದ್ದಾರೆಯೇ ಹೊರತು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸುವ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ ಎಂದಿದ್ದಾರೆ.

ಪ್ರಸ್ತುತ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಮತ್ತು ನಾಯಕತ್ವ ಬದಲಾವಣೆಯ ಕುರಿತು ನಡೆಯುತ್ತಿರುವ ಎಲ್ಲಾ ಚರ್ಚೆಗಳು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಹೇಳುವ ಮೂಲಕ ಗೃಹ ಸಚಿವರು ಚರ್ಚೆಗಳಿಗೆ ಪೂರ್ಣವಿರಾಮ ಇಟ್ಟಿದ್ದಾರೆ.

Related Articles

Back to top button