Latest

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ಆರಂಭವಾಗಿದೆ. ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.

ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ, ಸಚಿವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ.

Home add -Advt

ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆ, ಅಭ್ಯರ್ಥಿಗಳ ಆಯ್ಕೆ, ಸಚಿವ ಸಂಪುಟ ವಿಸ್ತರಣೆ, ಮುಂಬರು ವಿಧಾನಸಭಾ ಚುನಾವಣಾ ತಯಾರಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
5-6 ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಗೆ ಸಜ್ಜು

Related Articles

Back to top button