ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಪ್ರಮುಖವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸೇರಿ ನಾಲ್ವರ ಹೆಸರು ಪ್ರಸ್ತಾಪಿಸಲಾಗಿದೆ.
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಯಿತು. ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿ.ವೈ.ವಿಜಯೇಂದ್ರ, ಲಕ್ಷ್ಮಣ ಸವದಿ, ನಿರ್ಮಲ್ ಕುಮಾರ್ ಸುರಾನಾ, ಛಲವಾದಿ ನಾರಾಯಣಸ್ವಾಮಿ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ನಾವು ಹೆಸರನ್ನು ಕಳುಹಿಸಿಕೊಡುತ್ತೇವೆ. ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ
ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ