Kannada NewsKarnataka NewsLatest
ಬಿಜೆಪಿಯಲ್ಲಿ ಇಬ್ಬರು ಸ್ಪರ್ಧೆ ಮಾಡಿದ್ದಾರೆ, ಅವರಿಬ್ಬರಲ್ಲಿ ಯಾರು ಗೆಲ್ಲುತ್ತಾರೆಂದು ಗೊತ್ತಿಲ್ಲ – ಶಾಸಕ ಎನ್.ಎ.ಹ್ಯಾರಿಸ್
ಪ್ರಗತಿವಾಹಿನಿ ಸುದ್ದಿ, ಗೋಕಾಕ : ಬಿಜೆಪಿ ಪಕ್ಷ ಹಿರಿಯ ನಾಯಕರನ್ನು ಕಡೆಗಣಿಸಿದೆಯೇ ವಿನಹಃ ಕಾಂಗ್ರೆಸ್ ಪಕ್ಷವಲ್ಲ ಎಂದು ಶಾಸಕ ಎನ್.ಎ.ಹ್ಯಾರಿಸ್ ಟಾಂಗ್ ನೀಡಿದ್ದಾರೆ.
ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ನಡೆದ ಮುಖಂಡರ ಸಭೆ ಬಳಿಕ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷ ಹಿರಿಯ ನಾಯಕರನ್ನು ಯಾವತ್ತು ಕಡೆಗಣಿಸಿಲ್ಲ. ಬಿಜೆಪಿಯೇ ತಮ್ಮ ಹಿರಿಯ ನಾಯಕರನ್ನ ಕಡೆಗಣನೆ ಮಾಡಿದೆ ಎಂದಿದ್ದಾರೆ.
ಪಕ್ಷವನ್ನು ಗೆಲ್ಲಿಸಬೇಕೆಂದು ಅಭ್ಯರ್ಥಿ ಹೆಸರು ಘೋಷಣೆಗೂ ಮೊದಲೇ ಕೆಲಸ ಮಾಡಲು ಪ್ರಾರಂಭಿಸಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಯತ್ನಿಸುತ್ತೇವೆ. ಅಭ್ಯರ್ಥಿ ಘೋಷಣೆ ಮೊದಲು ಟಿಕೆಟ್ ಬೇಡಿಕೆ ಸಹಜವೆಂದರು.
ಪಕ್ಷದ ಟಿಕೆಟ್ ಯಾರಿಗೆ ಕೊಡುತ್ತಾರೋ ಅವರ ಪರ ಕೆಲಸ ಮಾಡುತ್ತಾರೆ. ಹಾಗೇ ಪ್ರಕಾಶ್ ಹುಕ್ಕೇರಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರ ಕ್ಷೇತ್ರದಲ್ಲಿ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದಾರೆ. ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಅವರ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಬರಲಿವೆ ಎಂಬ ಭರವಸೆ ಇದೆ ಎಂದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಖಂಡಿತ ಗೆಲ್ಲುತ್ತಾರೆ. ಆದರೆ ಎಷ್ಟು ಮತಗಳನ್ನು ಹೆಚ್ಚು ಪಡೆಯಬಹುದು ಎಂಬುವುದರ ಬಗ್ಗೆ ಚರ್ಚೆ ಮಾಡಿ, ಕಾರ್ಯ ರೂಪಗಳನ್ನು ಸರಿಪಡಿಸುತ್ತಿದ್ದೇವೆ. ತಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಬಿಜೆಪಿ ಪಕ್ಷದಲ್ಲಿ ಇಬ್ಬರು ಸ್ಪರ್ಧೆ ಮಾಡಿದ್ದಾರೆ. ಅವರಿಬ್ಬರಲ್ಲಿ ಯಾರು ಗೆಲ್ಲುತ್ತಾರೆಂದು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಪಕ್ಷದಿಂದ ನಮ್ಮ ಅಭ್ಯರ್ಥಿ ಗೆಲ್ಲುವುದು ಗ್ಯಾರಂಟಿ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ
ಗೋಕಾಕ, ಅರಭಾವಿ ವಿಧಾನಸಭೆ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಹಿಲ್ ಗಾರ್ಡನ್ ಕಚೇರಿಯಲ್ಲಿ ಶನಿವಾರ ಸಭೆ ನಡೆಸಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಅಭ್ಯರ್ಥಿಯ ಗೆಲುವಿನಿಂದ ಪಕ್ಷಕ್ಕೆ ಶಕ್ತಿ ಬರಲಿದೆ. ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಮುಖಂಡರಿಗೆ ತಿಳಿಸಿದರು.
ಚುನಾವಣಾ ವೀಕ್ಷಕರಾದ ಎನ್. ಎ.ಹ್ಯಾರಿಸ್, ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಕಲ್ಪನಾ ಜೋಶಿ ಹಾಗೂ ಗೋಕಾಕ, ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಸತೀಶ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು ಚುನಾವಣೆ ವೀಕ್ಷಕರರನ್ನಾಗಿ ಶಾಸಕ ಎನ್.ಎ.ಹ್ಯಾರಿಸ್ ಅವರನ್ನು ನೇಮಕ ಮಾಡಿದ್ದಾರೆ. ಈ ಹಿನ್ನಲೆ ಅವರು ಪ್ರವಾಸ ಮಾಡಿ, ಶಾಸಕರು, ಮಾಜಿ ಶಾಸಕರು, ಮುಖಂಡರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದರು.
ಸ್ಥಿತಿಗತಿ ಬಗ್ಗೆ ಅಧ್ಯಕ್ಷರಿಗೆ ವರದಿ ಮಾಡುವುದು ವಾಡಿಕೆ. ಅದೇ ರೀತಿ ಇಂದು ಹ್ಯಾರಿಸ್ ಅವರು ಮುಖಂಡರ ಜತೆಗೆ ಚರ್ಚಿಸಿದ್ದಾರೆ, ಇಲ್ಲಿನ ಸ್ಥಿತಿಗತಿ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ವಿಧಾನಪರಿಷತ್ ಚುನಾವಣೆಯ ಮೊದಲ ದಿನದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಾಗುತ್ತಿದೆ. ಈಗಾಗಲೇ ಹೇಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ