Kannada NewsKarnataka NewsLatest

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನರಾಗಿದ್ದಾರೆ.

ಬೆಂಗಳೂರಿಗೆ ತೆರಳಿದ್ದ ಅವರು ವಾಸ್ತವ್ಯ ಹೂಡಿದ್ದ ಹೊಟೆಲ್ ಕೊಠಡಿಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಪ್ರಾಥಮಿಕ ಮಾಹಿತಿ ಬಂದಿದೆ.

Home add -Advt

ಎಬಿವಿಪಿಯಿಂದ ಸಾಮಾಜಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದ ಅವರು ಬಿಜೆಪಿಗೆ ದೊಡ್ಡ ಆಸ್ತಿಯಾಗಿದ್ದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ಮಾಡಿದ್ದರು.

ಅವಿವಾಹಿತರಾಗಿದ್ದ ಅವರು ಪೂರ್ಣಾವಧಿಯಾಗಿ ಬಿಜೆಪಿ, ಸಂಘ ಪರಿವಾರದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜ್ಯ ಯುವಮೋರ್ಚಾ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು.

Related Articles

Back to top button