Latest

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿ ರಚನೆ; ಯಾವೆಲ್ಲ ನಾಯಕರಿಗೆ ಸ್ಥಾನ? ಇಲ್ಲಿದೆ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿಯಿದ್ದು, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜ್ಯ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ನಡುವೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿ ರಚನೆ ಮಾಡಿದೆ.

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇಮಕಗೊಂಡಿದ್ದಾರೆ. ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಒಟ್ಟು 25 ನಾಯಕರಿಗೆ ಸ್ಥಾನ ನೀಡಲಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ,ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರಿಗೆ ಸ್ಥಾನ ನೀಡಲಾಗಿದೆ.

ಇನ್ನು ಚುನಾವಣಾ ನಿರ್ವಹಣಾ ಸಮಿತಿಯಲ್ಲಿ ಒಟ್ಟು 14 ನಾಯಕರಿಗೆ ಸ್ಥಾನ ನೀಡಲಾಗಿದ್ದು, ಪ್ರಮುಖವಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರಿಗೆ ಸ್ಥಾನ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button