Latest

*ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ ಪರ್ವ; ಮತ್ತೊಂದು ವಿಕೆಟ್ ಪತನ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡ ದೊಡ್ಡಪ್ಪಗೌಡ ಪಕ್ಷ ತೊರೆದಿದ್ದಾರೆ.

ದೊಡ್ಡಪ್ಪಗೌಡ, ಕಲಬುರ್ಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ನಿನ್ನೆ ಘೋಷಣೆಯಾದ ಬಿಜೆಪಿ ಅಭ್ಯರ್ಥಿಗಳ ಮೊದಲಪಟ್ಟಿಯಲ್ಲಿ ಜೇವರ್ಗಿ ಟಿಕೆಟ್ ಕೈತಪ್ಪಿದೆ. ಇದರಿಂದ ಪಕ್ಷದ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ದೊಡ್ಡಪ್ಪಗೌಡ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ದೊಡ್ಡಪ್ಪಗೌಡ ಪಾಟೀಲ್, 2008ರಲ್ಲಿ ಮಾಜಿ ಸಿಎಂ ಧರ್ಮಸಿಂಗ್ ಅವರನ್ನು ಸೋಲಿಸಿದ್ದರು. ಇನ್ನು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡಪ್ಪಗೌಡ ಅವರು ಜೆಡಿಎಸ್ ನಿಂದ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
https://pragati.taskdun.com/d-k-shivakumarbjp-leader-padmarajcongress-join/

Related Articles

Back to top button